ಬೆಂಗಳೂರು: ಸಿಸಿಬಿ (CCB) ಮಾದಕ ದ್ರವ್ಯ ನಿಗ್ರಹ ದಳವು ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ, ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಕ್ರಿಸ್ಟೆಲ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದೆ.
ಬಾತ್ಮೀದಾರರಿಂದ ದೊರೆತ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಇಬ್ಬರು ಡ್ರಗ್ (Drugs) ಪೆಡ್ಲರ್‌ಗಳನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ, ಆರೋಪಿಗಳು ಬಿಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.
ಬಂಧಿತ ವಿದೇಶಿ ಪ್ರಜೆಗಳಿಂದ 1 ಕೆಜಿ 47 ಗ್ರಾಂ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ಮತ್ತು ದಂಧೆಯಿಂದ ಸಂಪಾದಿಸಿದ್ದ ₹42,800/- ನಗದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲುಗಳ ಒಟ್ಟು ಮೌಲ್ಯ ಅಂದಾಜು ₹ 2.50 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






