ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಸ್ಪರ್ಶದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಗದ್ದೆಯಲ್ಲಿ ನೀರಿನ ಮೋಟರ್ ಆನ್ ಮಾಡಲು ತೆರಳಿದ್ದ ವಿವೇಕ್(14) ಎಂಬ ವಿದ್ಯಾರ್ಥಿ ವಿದ್ಯುತ್ ಶಾಕ್‌ಗೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಿಂದ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.






