ಬೆಂಗಳೂರು: ನಗರದ ರಸ್ತೆಗುಂಡಿ ಸಮಸ್ಯೆ ಇನ್ನೂ ಬಗೆಹರಿಯದೇ ಮುಂದುವರಿದಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಡೆಡ್‌ಲೈನ್‌ನ್ನೂ ಜಿಬಿಎ ಪಾಲಿಸದಿರುವುದು ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ.
ಅಕ್ಟೋಬರ್ 31ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚುವಂತೆ ಸಿಎಂ ಸೂಚಿಸಿದ್ದರೂ, ಕೆಲಸ ಮುಗಿಯದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಬಿಎ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಸಿಎಂ ಇದೀಗ ನವೆಂಬರ್ 3 ರೊಳಗೆ ರಸ್ತೆಗುಂಡಿ ಮುಚ್ಚಲು ಫೈನಲ್ ಡೆಡ್‌ಲೈನ್ ನೀಡಿದ್ದಾರೆ. ಸೋಮವಾರ ಸಂಜೆ 4 ಗಂಟೆಯೊಳಗೆ ಎಲ್ಲಾ ಕೆಲಸ ಪೂರ್ಣಗೊಳ್ಳಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದಾರೆ. ಯಾವುದೇ ನೆಪ ಹೇಳದೆ ಗುಂಡಿ ಮುಚ್ಚುವ ಕಾರ್ಯ ಮುಗಿಸಲು ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಖಡಕ್ ಆದೇಶ ನೀಡಲಾಗಿದೆ.
ಗುಂಡಿ ಮುಚ್ಚಿದ ಬಗ್ಗೆ ಕಡ್ಡಾಯವಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಸ್ವತಃ ಶೀಘ್ರದಲ್ಲೇ ನಗರದ ರಸ್ತೆಗಳ ಪರಿಶೀಲನೆ ನಡೆಸಲಿದ್ದಾರೆ. ಸಿಎಂ ರೌಂಡ್ಸ್‌ಗೆ ಬರಲಿದ್ದಾರೆ ಎನ್ನುವ ವಿಚಾರ ಇದೀಗ ಅಧಿಕಾರಿಗಳಲ್ಲಿ ಚಟುವಟಿಕೆ ಹೆಚ್ಚಿಸಿದೆ.






