ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸರ್ಕಾರ ಕರ್ನಾಟಕ ವಿರೋಧಿ ಧೋರಣೆಯನ್ನು ತಳೆದುಕೊಂಡಿದೆ ಕಿಡಿ ಕಾರಿದರು.
“ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಇದೆ. ಕೇಂದ್ರದ ತಾರತಮ್ಯದ ವಿರುದ್ಧ ರಾಜ್ಯ ಸರ್ಕಾರ ಧ್ವನಿ ಎತ್ತುತ್ತಿದೆ. “ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಿದರೂ, ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ದೊರಕುತ್ತಿಲ್ಲ,” ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಹಿಂದಿ ಭಾಷೆ ಹೇರಿಕೆ ಮಾಡಲು ಯತ್ನಿಸುತ್ತಿರುವ ಕೇಂದ್ರದ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಯುವ ಜನತೆ ಎದ್ದು ನಿಂತು ಕನ್ನಡವನ್ನು ಜಗತ್ತಿಗೆ ಪಸರಿಸಬೇಕು. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ,” ಎಂದು ಸಿಎಂ ಕರೆ ನೀಡಿದರು.
ರಾಜ್ಯ ಸರ್ಕಾರದಿಂದ 180 ಮದರಸಾಗಳಲ್ಲಿ ಕನ್ನಡ ಬೋಧನೆ ಕಡ್ಡಾಯಗೊಳಿಸಲಾಗಿದೆ. 483 ಕೋಟಿ ರೂ. ವೆಚ್ಚದಲ್ಲಿ 100 ಉರ್ದು ಶಾಲೆಗಳ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದರು.
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಪ್ರತ್ಯೇಕ ವೈದ್ಯಕೀಯ ಶಾಲೆ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು. 2024ರೊಳಗೆ 14,499 ಪ್ರಾಥಮಿಕ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಜೊತೆಗೆ 18 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಅವರು ವಿವಿಧ ಯೋಜನೆಗಳ ಕುರಿತು ವಿವರಿಸುತ್ತಾ, KMF ನಿಂದ ದಿನಕ್ಕೆ 1 ಕೋಟಿ ಲೀಟರ್‌ಗಿಂತ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ಗೃಹಜ್ಯೋತಿ ಯೋಜನೆಗೆ 23 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಯುವಜನತೆಗೆ 750 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ತಿಳಿಸಿದರು.
ದೇಶದ ಹೂಡಿಕೆ ಕ್ರಮದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದ ಸಿಎಂ, ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.






