ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದೇ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಕರಾಳ ದಿನ ಮೆರವಣಿಗೆ ನಡೆಸಿ ಉದ್ಧಟತನ ತೋರಿದ ಹಿನ್ನೆಲೆ, ಬೆಳಗಾವಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಪೋಲೀಸ್ ಆಯುಕ್ತ ಭೂಷಣ್ ಬೋರಸೆ ಅವರು ನೀಡಿದ ಹೇಳಿಕೆಯಲ್ಲಿ, “ಕರಾಳ ದಿನ ಆಚರಣೆಗೆ ಯಾವುದೇ ರೀತಿಯ ಅನುಮತಿ ನೀಡಿರಲಿಲ್ಲ. ಅನುಮತಿ ನೀಡದಿದ್ದರೂ ಎಂಇಎಸ್ ನವರು ಮೆರವಣಿಗೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯೋತ್ಸವದಂದೇ ಬೆಳಗಾವಿಯಲ್ಲಿ MES ಪುಂಡಾಟಿಕೆ: ಪೊಲೀಸರ ವರ್ತನೆಗೆ ಕನ್ನಡಿಗರ ಆಕ್ರೋಶ!
ಅದೇ ವೇಳೆ, ಮೆರವಣಿಗೆಯ ಬಳಿಕ ನಾಡದ್ರೋಹಿ ಎಂಇಎಸ್ ನಾಯಕರೊಂದಿಗೆ ಸೆಲ್ಫಿ ತೆಗೆದುಕೊಂಡಿರುವ ಮಾಳಮಾರುತಿ ಠಾಣೆಯ ಸಿಪಿಐ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ದಿನವೇ ಇಂತಹ ನಾಡದ್ರೋಹಿ ಚಟುವಟಿಕೆ ನಡೆಸಿದ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿವೆ.






