ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಕಮಲಾಪುರ ತಾಲೂಕಿನ ಮಸಳಾಪುರ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಸಳಾಪುರ ಗ್ರಾಮದಿಂದ ಸುಮಾರು 1.5 ಕಿಲೋಮೀಟರ್ ದೂರದಲ್ಲಿ ಗ್ರಾಮಸ್ಥರಿಗೆ ಭೂಕಂಪನದ ಅನುಭವವಾಗಿದೆ.
ಈ ಬಗ್ಗೆ ಅಧಿಕಾರಿಗಳು ಖಚಿತಪಡಿಸಿದ್ದು, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಭೂಕಂಪನದ ತೀವ್ರತೆ ಹಾಗೂ ಕಾರಣ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಧಿಕಾರಿಗಳು ಮಸಳಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಗ್ರಾಮದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಗ್ರಾಮಸ್ಥರಿಗೆ ಭಯಪಡದಂತೆ ಮನವಿ ಮಾಡಿದ್ದಾರೆ.






