ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ (Medical Science) ಸಂಸ್ಥೆಯಲ್ಲಿ 450 ಹಾಸಿಗೆ ಹೊಸ ಆಸ್ಪತ್ರೆಯ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದ್ದು, ಜಿಲ್ಲೆಯ ಜನರ ಬೇಡಿಕೆಯಂತೆ ಮುಂಬರುವ ಬಜೆಟ್‌ನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯು (Multi Speciality Hospital) ಘೋಷಣೆಯಾಗುತ್ತದೆ ಮತ್ತು ಜಿಲ್ಲೆಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಭರವಸೆ ನೀಡಿದ್ದಾರೆ.
ಅವರು ಶನಿವಾರ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ, ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ರಾಜ್ಯದ ಕರಾವಳಿ ಪ್ರದೇಶವನ್ನು ಅಭಿವೃದ್ಧಿಪಡಿಸಲು ನೀಲನಕ್ಷೆಯನ್ನು ತಯಾರಿಸಿ, 23 ಸಾವಿರ ಕೋಟಿ ವೆಚ್ಚದಲ್ಲಿ 126 ಪ್ರಾಜೇಕ್ಟ್ಗಳು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗÀಳಿಂದ ಪ್ರವಾಸೋದ್ಯಮ, ವಾಣಿಜ್ಯ ಬಂದರು, ಮೀನುಗಾರಿಕೆ ಬಂದರು ಮತ್ತು ಮೀನುಗಾರಿಕೆಗೆ ಅಭಿವೃದ್ಧಿಯ ಜೊತೆಯಲ್ಲಿ ನಿರುದ್ಯೋಗ ಸಮಸ್ಯೆ, ಕಡಲ ಕೊರೆತ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಲಿದೆ ಎಂದರು.
ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭುವನೇಶ್ರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸ್ತಬ್ಧ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.






