ಉಡುಪಿ: ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದ ಬೇಡಿಕೆಗೆ ಬೆಂಬಲ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದರು.
ಉಡುಪಿಗೆ ಆಗಮಿಸಿದ್ದ ವೇಳೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟಗಾರರಿಗೆ ನಾನು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಏಕೀಕರಣಕ್ಕಾಗಿ ಅನೇಕರು ಹೋರಾಡಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ಒಂದು ಕರ್ನಾಟಕವಾಗಿರಬೇಕು,” ಎಂದು ಹೆಬ್ಬಾಳ್ಕರ್ ಹೇಳಿದರು.
ರಾಜ್ಯ ವಿಭಜನೆಗೆ ಬದಲಾಗಿ ಸಮಗ್ರ ಅಭಿವೃದ್ಧಿಯತ್ತ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯೋತ್ಸವ ಬೆನ್ನಲ್ಲೇ ಕಲಬುರಗಿಯಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಸಮಿತಿ ವತಿಯಿಂದ ಧರಣಿ, ಪ್ರತಿಭಟನೆ ನಡೆಸಲಾಯಿತು. ಕಲ್ಯಾಣ ಕರ್ನಾಟಕಕ್ಕೆ ನ್ಯಾಯ ಬೇಕು ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಹೈಡ್ರಾಮಾ ನಡೆಸಿದ್ದರು.






