ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಗುಂಪುಗಾರಿಕೆ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪಕ್ಷದ ನಾಯಕ ರಮೇಶ್ ಬಾಬು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಬಾಬು ಅವರು ಬೆಂಗಳೂರಿನಲ್ಲಿ ಮಾತನಾಡಿ, “ಬಿಜೆಪಿಯಲ್ಲಿ ಗುಂಪುಗಾರಿಕೆ ನಡೆಯುತ್ತಿದೆ. ಶೋಭಾ ಕರಂದ್ಲಾಜೆ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಣ್ಣಿಟ್ಟಿದ್ದಾರೆ. ಸಚಿವ ಸ್ಥಾನ ಉಳಿಸಿಕೊಳ್ಳಲು ರಾಜಕೀಯ ಯತ್ನಗಳಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದರು.
ಇತ್ತೀಚೆಗೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಸರ್ಕಾರದ ವಿರುದ್ಧ ಟೀಕಿಸಿದ್ದ ಹಿನ್ನೆಲೆಯಲ್ಲಿ, ರಮೇಶ್ ಬಾಬು ಅವರ ಈ ಹೇಳಿಕೆ ಗಮನ ಸೆಳೆದಿದೆ.
ಪಕ್ಷದ ಒಳಜಗಳ ಮತ್ತಷ್ಟು ಬಯಲಾಗಿರುವಂತೆಯೇ, ಶೋಭಾ ವಿರುದ್ಧದ ಈ ವಾಗ್ದಾಳಿ ಬಿಜೆಪಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.






