ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಪ್ರಮುಖ ತಿರುವು ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಸಹ ಆರೋಪಿ ಇಂದು ಬೆಂಗಳೂರು ಸೆಷನ್ಸ್ ಕೋರ್ಟ್‌ಗೆ ಖುದ್ದಾಗಿ ಹಾಜರಾಗಿದ್ದಾರೆ.
ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ನಿಗದಿಯಾಗುವ ದಿನವಾಗಿದ್ದು, ನ್ಯಾಯಾಧೀಶರ ಆದೇಶದಂತೆ ಎಲ್ಲ ಆರೋಪಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚಿಸಲಾಗಿತ್ತು.
ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದರು.
ಕೋರ್ಟ್ ಆವರಣದಲ್ಲಿ ಭಾರೀ ಸಂಖ್ಯೆಯಲ್ಲಿ ವಕೀಲರು ಮತ್ತು ಜನರು ಸೇರಿದ್ದರಿಂದ ಭದ್ರತೆ ಹೆಚ್ಚಿಸಲಾಯಿತು. ಪೊಲೀಸರು ನ್ಯಾಯಾಲಯದ ಸುತ್ತಮುತ್ತ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳು ಕೈಗೊಂಡಿದ್ದಾರೆ






