ಬೆಂಗಳೂರು: ರಾಜ್ಯ ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ಮಂಗಳೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ 50ಕ್ಕೂ ಹೆಚ್ಚು ಸಹಾಯಕ ಕೃಷಿ ನಿರ್ದೇಶಕರನ್ನು ವರ್ಗಾಯಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ವರ್ಗಾವಣೆ ಮಾಡಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರ್ಗಾಯಿಸಲ್ಪಟ್ಟ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಹೊಸ ಹುದ್ದೆ ಮತ್ತು ಸ್ಥಳಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.







