ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಲಲಿತ ಅಶೋಕ ಹೊಟೇಲ್ ನಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೆಂಗಳೂರು ಕೌಶಲ್ಯ ಶೃಂಗಸಭೆ-2025ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ಅಂಗ ಸಂಸ್ಥೆಗಳಿಗೆ ನೀಡುವ ಕೌಶಲ್ಯ ಶೃಂಗ ಸಭೆ 2025ರ ಪ್ರಶಸ್ತಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಭಾವಿಕೇರಿ ಗ್ರಾಮ ಪಂಚಾಯತಿಯ ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಹಿರಿಹೊನ್ನಪ್ಪ ವಿಕಾಸ ಮಹಿಳಾ ಸ್ವ ಸಹಾಯ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯ, ಕಲಬುರಗಿಯ ಅಳಂದ ತಾಲ್ಲೂಕಿನ ಗುಂಜ ಬಬಲಾದ ಗ್ರಾ ಪಂಚಾಯತಿ ಗಂಗಾ ಪರಮೇಶ್ವರಿ ಒಕ್ಕೂಟದ ಚೆನ್ನಮ್ಮ ಸ್ವ ಸಹಾಯ ಸಂಘ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿಪುರ ಗ್ರಾಮ ಪಂಚಾಯತಿಯ ಝಾನ್ಸಿರಾಣಿ ಮಹಿಳಾ ಒಕ್ಕೂಟದ ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಗುಂಪು, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ನಡವಿ ಗ್ರಾಮ ಪಂಚಾಯತಿಯ ಶ್ರೀ ರಾಮಲಿಂಗೇಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ತಾಯಮ್ಮದೇವಿ ಸ್ವ-ಸಹಾಯ ಗುಂಪು, ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆಯ ಶ್ರೀದುರ್ಗಾ ಪ್ರದೇಶ ಮಟ್ಟದ ಒಕ್ಕೂಟದ ದಿವ್ಯಜ್ಯೋತಿ ನಿರಂತರ ಉಳಿತಾಯ ಗುಂಪು, ಬೆಂಗಳೂರು ನಗರ ಜಿಲ್ಲೆಯ ಪಶ್ಚಿಮ ನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸರೋಜಿನಿ ನಾಯ್ಡು ಪ್ರದೇಶ ಮಟ್ಟದ ಒಕ್ಕೂಟದ ಅನ್ನಪೂರ್ಣೇಶ್ವರಿ ಮಹಿಳಾ ಸ್ವ-ಸಹಾಯ ಸಂಘ, ರಾಯಚೂರು ಜಿಲ್ಲೆಯ ರಾಯಚೂರು ಮಹಾನಗರ ಪಾಲಿಕೆಯ ಗಣೇಶ ಪ್ರದೇಶ ಮಟ್ಟದ ಒಕ್ಕೂಟದ ಅಕ್ಕ ಮಹಾದೇವಿ ಮಹಿಳಾ ಸ್ವ-ಸಹಾಯ ಸಂಘ ಅತ್ಯುತ್ತಮ ಮಹಿಳಾ ಸ್ವ ಸ-ಸಹಾಯ ಸಂಘ ಪ್ರಶಸ್ತಿಗೆ ಭಾಜನರಾದ ಹೆಮ್ಮೆಯ ಸಂಘಗಳಾಗಿವೆ.
ಸಮಾರಂಭದಲ್ಲಿ ಶಿವಕಾಂತಮ್ಮ ನಾಯಕ, ಅಧ್ಯಕ್ಷರು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ, ಡಾ. ಇ.ವಿ ರಮಣರೆಡ್ಡಿ ಅಧ್ಯಕ್ಷರು ಕೆಎಸ್ ಡಿಎ, ಶ್ರೀನಿವಾಸ್ ಎಂ, ಅಪರ ಅಭಿಯಾನ ನಿರ್ದೇಶಕರು, ಸಂಜೀವಿನಿ- ಕೆಎಸ್ಆರ್‌ಎಲ್‌ಪಿಎಸ್ ಹಾಗೂ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಗಣ್ಯರು ಉಪಸ್ಥಿತರಿದ್ದರು.






