ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಕಳುಹಿಸಿದ್ದ, ಗುಜರಾತ್ (Gujarat) ಮೂಲದ ರೆನೆ ಜೋಶಿಲ್ದಾ ಎಂಬ ಟೆಕ್ಕಿಯನ್ನು ಸೈಬರ್ ಕ್ರೈಂ ಪೊಲೀಸರು ( Cyber Crime Police)ಬಂಧಿಸಿದ್ದಾರೆ.
ಬೆಂಗಳೂರಿನ ಏಳು ಶಾಲೆಗಳಿಗೆ ಬೆದರಿಕೆ ಇ–ಮೇಲ್ ಕಳುಹಿಸಲಾಗಿದ್ದನ್ನು ಅರಿತ ಸೈಬರ್ ಕ್ರೈಂ ಪೊಲೀಸರು ತಾಂತ್ರಿಕ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬೆದರಿಕೆ ಹಿಂದಿರುವ ಉದ್ದೇಶ ಹಾಗೂ ಇತರರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.






