ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ದೆಹಲಿಯಲ್ಲಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಇದನ್ನೂ ಓದಿ:
RSS ಪಥಸಂಚಲನ: ಸರ್ಕಾರಕ್ಕೆ ಭಾರೀ ಹಿನ್ನಡೆ
ರಾಜ್ಯದಲ್ಲಿ ಯಾವ ನವೆಂಬರ್, ಡಿಸೆಂಬರ್, ಜನವರಿ, ಫೆಬ್ರವರಿ ಕ್ರಾಂತಿ ಇಲ್ಲ. ಆದರೆ 2028ಕ್ಕೆ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಹೇಳಿದ್ದಾರೆ.
2025, 2026ಕ್ಕೂ ಯಾವ ಕ್ರಾಂತಿಯೂ ಇಲ್ಲ. ಮುಂದಿನ ಬಾರಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ವಾಪಸ್ ಬರುವ ಮೂಲಕ ಕ್ರಾಂತಿ ಆಗಲಿದೆ. ಆಕಾಂಕ್ಷಿಗಳಿಗೆ ಏನು ಹೇಳಬೇಕೆಂದು ಹೈಕಮಾಂಡ್ ನಿರ್ಧರಿಸಲಿದೆ ಎಂದು ಅವರು ಹೇಳಿದ್ದಾರೆ.






