ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲ(RSS march)ನ ವಿಚಾರದಲ್ಲಿ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನ (RSS march)ಕ್ಕೆ ಅನುಮತಿ ನೀಡದಂತೆ ಹೊರಡಿಸಿದ್ದ ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಬೇಕೆಂದು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ (Dharwad High Court)ದ್ವಿಸದಸ್ಯ ಪೀಠ ವಜಾಗೊಳಿಸಿದೆ.
ಹಿಂದಿನ ಘಟನೆ ಹೀಗಿತ್ತು: ಸರ್ಕಾರ ಇತ್ತೀಚೆಗೆ “ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳು ಕಾರ್ಯಕ್ರಮ ನಡೆಸುವಂತಿಲ್ಲ” ಎಂದು ಆದೇಶ ಹೊರಡಿಸಿತ್ತು. ಇದಕ್ಕೆ ಆರ್‌ಎಸ್‌ಎಸ್ ಸೇರಿದಂತೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದವು. ನಂತರ ಏಕಸದಸ್ಯ ಪೀಠ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು.
ಈ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಪರವಾಗಿ ವಕೀಲರು ಧಾರವಾಡ (Dharwad)ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಇಂದು ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಸರ್ಕಾರದ ಅರ್ಜಿಯನ್ನು ವಜಾಗೊಳಿಸಿದೆ.
ಹೈಕೋರ್ಟ್‌ನ ಅಭಿಪ್ರಾಯ: ಸರ್ಕಾರ ಹೊರಡಿಸಿದ ಆದೇಶವು ಸಂವಿಧಾನ ನೀಡಿದ ಸಂಘಟನೆ ಸ್ವಾತಂತ್ರ್ಯ ಹಾಗೂ ಸಭೆ ಸ್ವಾತಂತ್ರ್ಯ ಹಕ್ಕಿಗೆ ಧಕ್ಕೆ ಉಂಟುಮಾಡುತ್ತದೆ ಎಂಬ ಕಾರಣಕ್ಕೆ ಏಕಸದಸ್ಯ ಪೀಠ ತಡೆ ನೀಡಿತ್ತು. ಈಗ ದ್ವಿಸದಸ್ಯ ಪೀಠವೂ ಅದೇ ತೀರ್ಪನ್ನು ಕಾಯ್ದುಕೊಂಡಿದೆ.
ಈ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆ ಎದುರಾಗಿದೆ.






