ಮೈಸೂರು: ಹುಲಿ (Tiger) ದಾಳಿಯಿಂದ ಮೂವರು ರೈತರು ಸಾವನ್ನಪ್ಪಿದ ಹಿನ್ನಲೆಯಲ್ಲಿ, ಬಂಡೀಪುರ (Bandipur)ಮತ್ತು ನಾಗರಹೊಳೆ ರಾಷ್ಟ್ರೀಯ (Nagarahole National Parks) ಉದ್ಯಾನಗಳಲ್ಲಿ ಸಫಾರಿ (safari)ಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಇದನ್ನೂ ಓದಿ:
ಭೀಕರ ದುರಂತ: Spot Death ಆದ ಯುವತಿ
ಹುಲಿ ದಾಳಿಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಎಲ್ಲಾ ಸಿಬ್ಬಂದಿಗಳನ್ನು ಹುಲಿ ಹಿಡಿಯುವ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಸದ್ಯಕ್ಕೆ ಪ್ರವಾಸಿಗರಿಗೆ ಸಫಾರಿ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಈ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






