ಯಾದಗಿರಿ: ಸಮಾಜ ಕಲ್ಯಾಣ ಇಲಾಖೆ (Social Welfare Department)ಯ ಅಧಿಕಾರಿ ಅಂಜಲಿ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಚೇರಿಗೆ ತೆರಳುತ್ತಿದ್ದ ವೇಳೆ ಅಂಜಲಿ (35) ಅವರ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಣಾಂತಿಕ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ನಂತರ ಗಂಭೀರವಾಗಿ ಗಾಯಗೊಂಡ ಅಂಜಲಿಯನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಅಂಜಲಿ ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ (Second Division Assistant) ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ನೌಕರಿಗೆ ಸೇರುವ ಮೊದಲು ಅವರು ಶಹಾಬಾದ್ ನಗರಸಭೆ(Shahabad City Municipal Council) ಯ ಅಧ್ಯಕ್ಷೆಯಾಗಿದ್ದರು. ಇವರ ಪತಿ ಗಿರೀಶ್ (Girish) ಅವರನ್ನು 2 ವರ್ಷಗಳ ಹಿಂದೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಪತಿಯ ಸಾವಿನ ನಂತರ ಸರ್ಕಾರಿ ಕೆಲಸ ನಿರ್ವಹಿಸುತ್ತಿದ್ದರು.
ಘಟನೆ ಕುರಿತು ಯಾದಗಿರಿ (Yadgir) ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರು ದುಷ್ಕರ್ಮಿಗಳ ಪತ್ತೆಗೆ ಪೊಲೀಸರು (Police) ಶೋಧಕಾರ್ಯ ಆರಂಭಿಸಿದ್ದಾರೆ.






