ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯವು, ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ.(ಕೆಎನ್: 2007) ಅವರನ್ನು ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾಗಿ ನೇಮಕ ಮಾಡಿದೆ.
ಈ ಹಿಂದೆ ಮೋಹನ್ ರಾಜ್ ಕೆ.ಪಿ. ಅವರು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ವಸತಿ ಇಲಾಖೆಯ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ.
ಅಷ್ಟೇ ಅಲ್ಲದೆ, ಮೋಹನ್ ರಾಜ್ ಕೆ.ಪಿ. ಅವರಿಗೆ ಬಾಗಲಕೋಟೆಯ ಅಪ್ಪರ್ ಕೃಷ್ಣಾ ಪ್ರಾಜೆಕ್ಟ್ (UKP) ನ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ನಿರ್ಮಾಣ ಆಯುಕ್ತರ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಸಹ ವಹಿಸಲಾಗಿದೆ. ಈ ಜವಾಬ್ದಾರಿಯನ್ನು ಅವರು ಮುಂದಿನ ಆದೇಶದವರೆಗೆ ನಿರ್ವಹಿಸಲಿದ್ದಾರೆ. ಈ ನೇಮಕಾತಿಯು ಕೂಡಲೇ ಜಾರಿಗೆ ಬರಲಿದೆ.
ಈ ಆದೇಶವು ಕರ್ನಾಟಕ ರಾಜ್ಯಪಾಲರ ಆಜ್ಞೆಯ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವೆಗಳು-1) ಅಧೀನ ಕಾರ್ಯದರ್ಶಿ (ಪ್ರಭಾರ) ನಾಗಪ್ಪ ಎಸ್.ಪರೇಟ್ ಅವರ ಸಹಿಯೊಂದಿಗೆ ಹೊರಡಿಸಲಾಗಿದೆ.







