ದಕ್ಷಿಣ ಕನ್ನಡ: ದಕ್ಷಿಣ ಭಾರತದ ಜನಪ್ರಿಯ ನಟಿ ಲೇಡಿ ಸೂಪರ್ ಸ್ಟಾರ್ ಯನತಾರಾ (Nayanthara) ಮತ್ತು ಅವರ ಪತಿ, ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ಅವರೊಂದಿಗೆ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ದಂಪತಿಗಳು ಕ್ಷೇತ್ರದಲ್ಲಿ ಪ್ರಸಿದ್ಧವಾದ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ್ದು, ಬಳಿಕ ದೇವರ ದರ್ಶನ ಪಡೆದಿದ್ದಾರೆ. ಹಾಗೂ ಕ್ಷೇತ್ರದ ಪರವಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ (Harish Injadi) ಅವರು ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರವಾಗಿದ್ದು, ಸರ್ಪ ದೋಷ ನಿವಾರಣೆಗಾಗಿ ದೇಶದ ನಾನಾ ಭಾಗಗಳಿಂದ ಭಕ್ತರು ಇಲ್ಲಿ ಆಗಮಿಸುತ್ತಾರೆ. ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಈ ಧಾರ್ಮಿಕ ಭೇಟಿ ಸ್ಥಳೀಯ ಭಕ್ತರಲ್ಲಿ ಕುತೂಹಲ ಮೂಡಿಸಿದೆ.






