ಚಿತ್ರದುರ್ಗ : ಹೃದಯ ಸಂಬಂಧಿ (Heart ailment) ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ (Ambulance) , ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಾಯಗೊಂಡಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹಾನಗಲ್ ಬಳಿ ರಾಷ್ಟ್ರೀಯ ಹೆದ್ದಾರಿ(National Highway) ಯಲ್ಲಿ ನಡೆದಿದೆ.
ಮೃತರು: ಅಪಘಾತದಲ್ಲಿ ಕಂಪ್ಲಿ ಮೂಲದ ಎಸ್. ಖಾಜಾವಲ್ಲಿ (59) ( S. Khajavalli) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖಾಜಾವಲ್ಲಿ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು.
ಬಳ್ಳಾರಿ-ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಈ ಅಂಬ್ಯುಲೆನ್ಸ್(Ambulance), ಹೆಚ್ಚಿನ ಚಿಕಿತ್ಸೆಗಾಗಿ ಖಾಜಾವಲ್ಲಿಯನ್ನು ಬೆಂಗಳೂರಿಗೆ ಕರೆದೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿರ್ಲಕ್ಷ್ಯದಿಂದಾಗಿ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಅಂಬ್ಯುಲೆನ್ಸ್‌ನಲ್ಲಿದ್ದ ಇತರ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿ (local hospital) ಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.






