ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಗಂಭೀರ ಆರೋಪದ ಮೇಲೆ ಉದ್ಯಮಿ ಹಾಗೂ ಚಲನಚಿತ್ರ ನಿರ್ಮಾಪಕ ಎ.ವಿ.ಆರ್. ಅರವಿಂದ್ ವೆಂಕಟೇಶ್ ರೆಡ್ಡಿ (A.V.R. Aravind Venkatesh Reddy) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಬಂಧನಕ್ಕಾಗಿ ಪೊಲೀಸರು ಲುಕ್ ಔಟ್ ನೋಟಿಸ್ (Lookout Notice) ಜಾರಿ ಮಾಡಿದ್ದರು. ಎ.ಸಿ.ಪಿ. ಚಂದನ್ (ACP Chandan) ಮತ್ತು ಸುಬ್ರಹ್ಮಣಿ ಅವರ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ಇಂದು ಮುಂಜಾನೆ ಶ್ರೀಲಂಕಾದಿಂದ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದಾಗ ವಿಮಾನ ನಿಲ್ದಾಣ (Airport)ದಲ್ಲಿ ಅವರನ್ನು ಲಾಕ್ ಮಾಡಲಾಗಿದೆ.
ಎ.ವಿ.ಆರ್. ಗ್ರೂಪ್‌ನ ಸಂಸ್ಥಾಪಕ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ, ಸಿನಿಮಾ ಇಂಡಸ್ಟ್ರಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ನಟ-ನಟಿಯರಿಗಾಗಿ ಹಲವು ಕ್ರಿಕೆಟ್ ಪಂದ್ಯಾವಳಿಗಳನ್ನು (ದುಬೈ, ಶ್ರೀಲಂಕಾ ಸೇರಿದಂತೆ ಹಲವೆಡೆ) ಆಯೋಜಿಸುತ್ತಿದ್ದರು ಮತ್ತು ಎ.ವಿ.ಆರ್. ಗ್ರೂಪ್ ಪ್ರಮುಖ ಸ್ಪಾನ್ಸರ್ ಆಗಿತ್ತು.
2021ರಲ್ಲಿ ನಟಿಗೆ ಪರಿಚಯವಾಗಿದ್ದ ಅರವಿಂದ್ ರೆಡ್ಡಿಯಿಂದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ನಟಿ ರಾಜರಾಜೇಶ್ವರಿ ನಗರ (ಆರ್.ಆರ್. ನಗರ) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದು ದಿನಗಳ ಹಿಂದೆ ಈ ಪ್ರಕರಣವನ್ನು ಗೋವಿಂದರಾಜನಗರ ಠಾಣೆಗೆ (Govindarajanagar Police Station) ವರ್ಗಾಯಿಸಲಾಗಿತ್ತು.






