ಬೆಂಗಳೂರು: ಜನತಾದಳ (ಜಾತ್ಯಾತೀತ) ಪಕ್ಷವು ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ನವೆಂಬರ್ 22 ರಂದು ಬೆಳ್ಳಿಹಬ್ಬದ (Silver Jubilee) ಆಚರಣೆಗೆ ಸಿದ್ಧತೆ ನಡೆಸಿದೆ.
ನ. 22ರಂದು ಜೆಡಿಎಸ್ (JDS)ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ನೇತೃತ್ವದಲ್ಲಿ ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ (J.P. Bhavan )ಸಮಾವೇಶ ನಡೆಯಲಿದೆ. ಈ ಸಂದರ್ಭದಲ್ಲಿ ದಳಪತಿಗಳು (ಜೆಡಿಎಸ್ ನಾಯಕರು) ಸಾಂಕೇತಿಕವಾಗಿ ಬೆಳ್ಳಿ ನಾಣ್ಯ (silver coin)ವನ್ನು ಬಿಡುಗಡೆ ಮಾಡಲಿದ್ದಾರೆ.
ಮುಂದಿನ ಮೂರು ತಿಂಗಳ ಕಾಲ ಹೆಚ್‌ಡಿಕೆ ಮತ್ತು ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ನೇತೃತ್ವದಲ್ಲಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D. Deve Gowda) ಮತ್ತು ಹೆಚ್‌ಡಿಕೆ ಅವರ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ.
ಈ ಯೋಜನೆ 2028ರ ವಿಧಾನಸಭಾ ಚುನಾವಣೆ (2028 Assembly Elections) ಗುರಿಯಾಗಿಟ್ಟುಕೊಂಡು, 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲು ಪಕ್ಷವು ಕಾರ್ಯತಂತ್ರ ರೂಪಿಸುತ್ತಿದ್ದು, ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನೂ ನಡೆಸಲು ತೀರ್ಮಾನಿಸಲಾಗಿದೆ.






