Home State Politics National More
STATE NEWS

BMRCL ಮೆಟ್ರೋ ನಿಲ್ದಾಣ ಸ್ಫೋಟಿಸುವ ಬೆದರಿಕೆ; ಕಿಡಿಗೇಡಿ ಬಂಧನ

Threat to blow up metro station miscreant arrested
Posted By: Sagaradventure
Updated on: Nov 18, 2025 | 5:23 AM

ಬೆಂಗಳೂರು ಮಹಾನಗರದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿ ಆತಂಕ ಸೃಷ್ಟಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲ್ಸನ್ ಗಾರ್ಡನ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಿಎಂಆರ್‌ಸಿಎಲ್‌ಗೆ (BMRCL) ಇ-ಮೇಲ್ ಮೂಲಕ ಮೆಟ್ರೋ ನಿಲ್ದಾಣವೊಂದನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು.

ನವೆಂಬರ್ 11 ರಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಿಡಿಗೇಡಿಯೊಬ್ಬ ಸಂದೇಶ ಕಳುಹಿಸಿದ್ದ. ತನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಗರದ ಯಾವುದಾದರೂ ಒಂದು ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಆತ ಬೆದರಿಕೆ ಹಾಕಿದ್ದ. ಈ ಬೆದರಿಕೆ ಸಂದೇಶವನ್ನು ಮೆಟ್ರೋ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿತ್ತು.

ಮೆಟ್ರೋ ನಿಲ್ದಾಣದ ಸುರಕ್ಷತೆ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದರು. ಬೆದರಿಕೆ ಹಾಕಿದ ಇ-ಮೇಲ್‌ನ ಮೂಲವನ್ನು ಪತ್ತೆಹಚ್ಚಿದ ವಿಲ್ಸನ್ ಗಾರ್ಡನ್ ಪೊಲೀಸರು, ರಾಜೀವ್ ಶೆಟ್ಟಿ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯ ಬಂಧನದ ಬಳಿಕ ನಗರದಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಮೆಟ್ರೋ ಸಿಬ್ಬಂದಿ ಮೇಲೆ ದ್ವೇಷ ಸಾಧಿಸಲು ಮತ್ತು ಸಂಸ್ಥೆಗೆ ತೊಂದರೆ ನೀಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.

Shorts Shorts