ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ (Dastapur village) ಅತ್ಯಂತ ಭೀಕರ ಘಟನೆಯೊಂದು ನಡೆದಿದ್ದು, ವೇಗವಾಗಿ ಬಂದ ಕಬ್ಬಿನ ಟ್ರ್ಯಾಕ್ಟರ್ (Tractor) ಹರಿದು ಶಾಲಾ ಬಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:
Deadly Virus Alert | ಕೇರಳದಲ್ಲಿ ‘ಮೆದುಳು ತಿನ್ನುವ ರೋಗ’ದ ಹಾವಳಿ: ಶಬರಿಮಲೆ ಯಾತ್ರಿಕರಿಗೆ ಎಚ್ಚರಿಕೆ!
ದಸ್ತಾಪುರ ಗ್ರಾಮದ ಸೈಯದ್ ಜಹೀರ್ ಮೀಯಾ (Syed Zaheer Miya) (10) ಎಂದು ಗುರಿತಿಸಲಾಗಿದ್ದು, ಮೃತ ಬಾಲಕ ಶಾಲೆಯಿಂದ (school) ಮನೆಗೆ ವಾಪಸ್ ಬರುತ್ತಿದ್ದಾಗ, ವೇಗವಾಗಿ ಬಂದ ಕಬ್ಬು ತುಂಬಿದ ಟ್ರ್ಯಾಕ್ಟರ್ ಆತನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬಾಲಕ ಕೆಳಗೆ ಬಿದ್ದಿದ್ದು, ಆತನ ತಲೆ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ.
ಈ ಘಟನೆ ಸಂಬಂಧ ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ (Sulepet Police Station) ಪ್ರಕರಣ ದಾಖಲಾಗಿದೆ.






