ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ (Lok Sabha elections) ವೇಳೆ ವ್ಯಾಪಕವಾಗಿ ಕೇಳಿಬಂದಿದ್ದ ಮಹದೇವಪುರ ವಿಧಾನಸಭಾ (Mahadevapura assembly) ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಳ್ಳತನ (Voter Theft) ಆರೋಪಕ್ಕೆ ಸಂಬಂಧಿಸಿದಂತೆ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ (Electronic City Police Station) ಎಫ್‌ಐಆರ್ (FIR) ದಾಖಲಾಗಿದೆ.
ಚುನಾವಣೆಯ ವೇಳೆ ಮಹದೇವಪುರದಲ್ಲಿ ನಕಲಿ ಮತದಾರರನ್ನು (Fake voters) ಪಟ್ಟಿಯಲ್ಲಿ ಸೇರಿಸಲಾಗಿದೆ ಹಾಗೂ ಜನಾದೇಶವನ್ನು ಬುಡಮೇಲು ಮಾಡುವ ಪ್ರಯತ್ನ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಹಲವು ರಾಜಕೀಯ ನಾಯಕರು ಇದೇ ಮಹದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದರು.
ಮತದಾರರೊಬ್ಬರಾದ ರಾಜು (Raju) ಎಂಬುವವರು ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಕೃತ್ಯದಲ್ಲಿ ರಾಜಕೀಯ ಪಕ್ಷದ ಸದಸ್ಯರು ಮತ್ತು ಖಾಸಗಿ ವ್ಯಕ್ತಿಗಳ ಕೈವಾಡವಿದೆ. ಒಬ್ಬ ಮತದಾರನಾಗಿ ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.






