ಬೆಂಗಳೂರು: ನಗರದ ಚಿಕ್ಕಬಾಣಾವರ ರೈಲು ನಿಲ್ದಾಣದ (Chikkabanavara Railway Station) ಬಳಿ ದಾರುಣ ಘಟನೆಯೊಂದು ನಡೆದಿದ್ದು, ವೇಗವಾಗಿ ಬಂದ ವಂದೇ ಭಾರತ್ (Vande Bharat) ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (Sterlin Eliza Shaji) (19) ಮತ್ತು ಜಸ್ಟಿನ್ ಜೋಸೆಫ್ (Justin Joseph) (20) ಮೃತ ವಿದ್ಯಾರ್ಥಿಗಳು. ಇವರಿಬ್ಬರೂ ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್ (Nursing) ವ್ಯಾಸಂಗ ಮಾಡುತ್ತಿದ್ದರು.
ಘಟನೆಯು ಮೇಲ್ನೋಟಕ್ಕೆ ಆತ್ಮಹತ್ಯೆ (suicide) ಇರಬಹುದೆಂದು ಶಂಕೆ ವ್ಯಕ್ತವಾಗಿದ್ದರೂ, ಹಾಗೂ ರೈಲ್ವೆ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿಗಳು ತಮ್ಮ ಪಿಜಿಗೆ (PG) ತೆರಳುವಾಗ ರೈಲ್ವೆ ಟ್ರ್ಯಾಕ್ (Railway tracks ) ಮೂಲಕ ಶಾರ್ಟ್‌ಕಟ್‌ನಲ್ಲಿ ಹೋಗಲು ಪ್ರಯತ್ನಿಸಿದ್ದರು. ಈ ವೇಳೆ, ಹೈಸ್ಪೀಡ್‌ನಲ್ಲಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಯಶವಂತಪುರ (Yeshwanthpur) ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಕುರಿತು UDR (Unnatural Death Report)) ಪ್ರಕರಣ ದಾಖಲಾಗಿದೆ. ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಅಪಘಾತಕ್ಕೀಡಾಗಿದ್ದಾರೆಯೇ ಎಂಬುದರ ಬಗ್ಗೆ ರೈಲ್ವೆ ಪೊಲೀಸರು ಮೃತರ ಬಗ್ಗೆ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.






