ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ (Tragic road accident)ಸಂಭವಿಸಿದ್ದು, ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ 8 ಮಂದಿ ಪ್ರಯಾಣಿಕರು ( six passengers )ಸಾವನ್ನಪ್ಪಿದ್ದಾರೆ.
ತಮಿಳುನಾಡಿನ (Tamil Nadu) ತೆಂಕಾಸಿ ಜಿಲ್ಲೆಯ ಇಡಕಲ್ ಬಳಿ ಈ ಭೀಕರ ಅಪಘಾತ (Accident)ನಡೆದಿದೆ. ಎರಡು ಬಸ್‌ಗಳ ಅತಿ ವೇಗ ಮತ್ತು ಚಾಲಕರ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಆಗಮಿಸಿ ಗಾಯಾಳುಗಳನ್ನು ರಕ್ಷಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾಗೂ ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಹೆಚ್ಚಿನ ತನಿಖೆ (Investigation)ಮುಂದುವರೆಸಿದ್ದಾರೆ. BigBreaking






