ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress)ಸಿಎಂ ಕುರ್ಚಿ ಕದನ ತೀವ್ರಗೊಂಡಿರುವ ಸಂದರ್ಭದಲ್ಲೇ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (AICC General Secretary K.C. Venugopal ) ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರ ಈ ದಿಢೀರ್ ಭೇಟಿ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕೊಚ್ಚಿಯಿಂದ ಬಂದ ಕೆ.ಸಿ. ವೇಣುಗೋಪಾಲ್ ಅವರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಬಂದಿಳಿದರು. ವಿಮಾನ ನಿಲ್ದಾಣದ ಆವರಣದಲ್ಲಿರುವ ತಾಜ್ ಹೋಟೆಲ್‌ನಲ್ಲಿ (Taj Hotel) ವಾಸ್ತವ್ಯ ಹೂಡಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DCM D.K. Shivakumar) ನಡುವಿನ ಪವರ್ ಶೇರಿಂಗ್ (power-sharing) ಚರ್ಚೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಆಗಮನವು ಕುರ್ಚಿ ಕಲಿಗಳಲ್ಲಿ ಹೈ ಅಲರ್ಟ್ ಸೃಷ್ಟಿಸಿದೆ. ರಾಜ್ಯ ಕಾಂಗ್ರೆಸ್‌ನ ನಾಯಕತ್ವ ಗೊಂದಲದ ಕುರಿತು ಹೈಕಮಾಂಡ್‌ನಿಂದ ಯಾವುದೇ ಸೂಚನೆ ನೀಡಲು ವೇಣುಗೋಪಾಲ್ ಬಂದಿದ್ದಾರೆಯೇ ಎಂಬ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.
ಅವರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಯಾವುದೇ ಮಾಧ್ಯಮಗಳೊಂದಿಗೆ ಮಾತನಾಡಲಿಲ್ಲ. ಹಾಗೂ ಅವರನ್ನು ಯಾವುದೇ ರಾಜ್ಯ ನಾಯಕರು ಭೇಟಿಯಾಗಿಲ್ಲದಿರುವುದರಿಂದ ಅವರ ಭೇಟಿಯ ಉದ್ದೇಶ ರಹಸ್ಯವಾಗಿಯೇ ಉಳಿದಿದೆ.
ನಾಳೆ ಬೆಳಿಗ್ಗೆ 7 ಗಂಟೆಗೆ ಅವರು ಕೇರಳದ ವಯನಾಡುಗೆ (Wayanad) ತೆರಳಲಿದ್ದಾರೆ ಎಂದು ತಿಳಿದುಬಂದಿದೆ.






