Home State Politics National More
STATE NEWS

BigBreaking: ಭೀಕರ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣ

D747beb8 c7cf 4544 ba46 74149d91a75a
Posted By: Devaraj Naik
Updated on: Nov 25, 2025 | 2:13 PM

ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಬೀಳಗಿ, ಪ್ರಾಮಾಣಿಕ ಮತ್ತು ಬಡತನದ ಹಿನ್ನೆಲೆಯಿಂದ ಬಂದವರು. ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಶನ್ ಲಿಮಿಟೆಡ್‌ನ (Karnataka State Minerals Corporation Limited) ವ್ಯವಸ್ಥಾಪಕ ನಿರ್ದೇಶಕರಾಗಿ (Managing Director), ಬೆಸ್ಕಾಂನ (BESCOM) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿಯೂ (DC Davanagere) ಕೆಲಸ ಮಾಡಿದ್ದಾರೆ.

ಘಟನೆಯ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Shorts Shorts