Home State Politics National More
STATE NEWS

PM Modi | ಪ್ರಧಾನಿ ಮೋದಿ ಇಂದು ಕರ್ನಾಟಕಕ್ಕೆ ಭೇಟಿ.. ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

Posted By: Meghana Gowda
Updated: Nov 28, 2025 | 3:22 AM

ಉಡುಪಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ಕರ್ನಾಟಕಕ್ಕೆ  ಭೇಟಿ ನೀಡುತ್ತಿದ್ದು,  ಉಡುಪಿ ಶ್ರೀಕೃಷ್ಣ ಮಠದಲ್ಲಿ (Sri Krishna Matha)ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ (Laksh Kanta Geeta Parayanam) ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಬೆಳಗ್ಗೆ 11 ಗಂಟೆಗೆ ಉಡುಪಿ ಹೆಲಿಪ್ಯಾಡ್‌ಗೆ (Udupi helipad) ಆಗಮಿಸಲಿದ್ದಾರೆ. ಅಲ್ಲಿಂದ 1.8 ಕಿ.ಮೀ ದೂರದ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ತೆರಳಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಮೊದಲಿಗೆ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವವರು. ನಂತರ ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷದ ಹಿನ್ನೆಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸ್ವರ್ಣ ಲೇಪಿತ ತೀರ್ಥ ಮಂಟಪ ಮತ್ತು ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚವನ್ನು(Golden Kavacha) ಉದ್ಘಾಟಿಸಲಿದ್ದಾರೆ.

ಗೀತಾ ಮಂದಿರಕ್ಕೆ ಭೇಟಿ: ಗೀತಾ ಮಂದಿರಕ್ಕೆ ತೆರಳಿ ನೂತನ ಅನಂತಪದ್ಮನಾಭ ದೇವರ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಗೋಡೆ ತುಂಬ ಶಿಲೆಯಲ್ಲಿ ಕೆತ್ತಿರುವ ಗೀತಾ ಬರಹ ಹಾಗೂ ಧ್ಯಾನ ಮಂದಿರ ವೀಕ್ಷಣೆ ಮಾಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಗವದ್ಗೀತೆಯ 10 ಶ್ಲೋಕಗಳನ್ನು ಭಕ್ತರೊಂದಿಗೆ ಪಠಿಸಲಿದ್ದಾರೆ(chanting 10 shlokas of the Bhagavad Gita). ಬಳಿಕ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

ಬಿಗಿ ಬಂದೋಬಸ್ತ್:

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಡುಪಿಯ ವಿವಿಧ ಸ್ಥಳಗಳಲ್ಲಿ ವಾಹನಗಳ ಸಂಚಾರವನ್ನು ಮತ್ತು ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ ಮುಂಗಟ್ಟು ಮುಚ್ಚಲು ಸೂಚಿಸಲಾಗಿದೆ. ಹಾಗೂ ಎರಡು ಕಿಲೋಮೀಟರ್‌ವರೆಗೆ ರಸ್ತೆಯಲ್ಲಿ ಬಾಂಬ್ ಸ್ಕ್ಯಾಡ್‌ ಗಸ್ತು ನಿಯೋಜಿಸಲಾಗಿದೆ.

ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಉಡುಪಿ ಭೇಟಿಯ ಕುರಿತು ಕನ್ನಡದಲ್ಲೇ ಟ್ವೀಟ್ (Tweeting in Kannada)ಮಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಎಂದು ಟ್ವೀಟ್‌ ನಲ್ಲಿ ಬರೆದಿದ್ದಾರೆ.

Shorts Shorts