ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ನ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr. G. Parameshwara) ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Minister Satish Jarkiholi) ಅವರ ನಡುವೆ ರಹಸ್ಯ ಮಾತುಕತೆ ನಡೆದಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಸಿಎಂ ಉಪಾಹಾರ ಮುಗಿಸಿದ ಸಮಯದಲ್ಲೇ, ಇನ್ನೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಾ. ಜಿ. ಪರಮೇಶ್ವರ್ ಅವರು ಒಟ್ಟಿಗೆ ಸೇರಿದ್ದರು.ನಿನ್ನೆ (ಮಂಗಳವಾರ) ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ, ಸುಮಾರು ಇಪ್ಪತ್ತು ನಿಮಿಷಗಳ ಕಾಲ ಕ್ಲೋಸ್ ಡೋರ್ ಮೀಟಿಂಗ್ (Close Door Meeting) ನಡೆಸಿದ್ದಾರೆ.
ನಿನ್ನೆ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಪರಮೇಶ್ವರ್, ಅದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ರಾಜಕಾರಣದಲ್ಲಿ ದಲಿತ ನಾಯಕರು ಎಂದು ಗುರುತಿಸಿಕೊಂಡಿರುವ ಇಬ್ಬರು ಪ್ರಭಾವಿ ಸಚಿವರು – ಡಾ. ಜಿ. ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ ಅವರು ಸಿಎಂ-ಡಿಸಿಎಂ (CM-DCM) ನಡುವಿನ ಹೊಂದಾಣಿಕೆಯ ಸಂದರ್ಭದಲ್ಲೇ ರಹಸ್ಯವಾಗಿ ಭೇಟಿಯಾಗಿ ಚರ್ಚೆ ನಡೆಸಿರುವುದು, ಅವರ ಮುಂದಿನ ನಡೆಯ ಬಗ್ಗೆ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. G. Parameshwara Meets Satish Jarkiholi |






