ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ (Bagalkote district) ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ನಿನ್ನೆ (ಮಂಗಳವಾರ) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ(Instant death)
ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ರಸ್ತೆಯಲ್ಲಿ ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಅತಿ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳಾದ, ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20) ಹಾಗೂ ಪ್ರಜ್ವಲ್ ಶೇಡಬಾಳ್ (17) ಸಿದ್ದಾಪುರ ಗ್ರಾಮದ(Siddapur village) ನಿವಾಸಿಗಳಾಗಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು, ಜೆಸಿಬಿ ಸಹಾಯದಿಂದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.






