ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ (High Court) ನಿರಾಕರಿಸಿದೆ.
ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತ್ತುಗೊಳಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ(Dismissed). ಕೆಳಹಂತದ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಪ್ರಜ್ವಲ್ ಪರ ವಕೀಲರು ಮಾಡಿದ್ದ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿಲ್ಲ.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಈ ಆದೇಶದ ವಿರುದ್ಧ ಪ್ರಜ್ವಲ್ ರೇವಣ್ಣ ಅವರು ಮೇಲ್ಮನವಿ ಸಲ್ಲಿಸಿದ್ದರು ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿದ್ದರು, ಆದರೆ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿರುವುದು ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ.






