ಶಿವಮೊಗ್ಗ: ಸಾಲಬಾಧೆ ತಾಳಲಾರದೆ ಶಿವಮೊಗ್ಗ ಸಹಾಯಕ ಕಮಿಷನರ್ (AC) ಕಚೇರಿಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ (Farmer) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ರೈತರನ್ನು ಸಿದ್ದನಮಠ ಗ್ರಾಮದ ರವಿಕುಮಾರ್ (47). ಇವರು ಸುಮಾರು ₹15 ಲಕ್ಷದಷ್ಟು ಸಾಲ (Debt) ಮಾಡಿಕೊಂಡಿದ್ದರು. ಸಾಲವನ್ನು ತೀರಿಸಲು ಸಾಧ್ಯವಾಗದೆ ಮನನೊಂದಿದ್ದ ಅವರು, ತಮ್ಮ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಎಸಿ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ವಿಷ ಸೇವಿಸಿದ್ದ ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ (Meggan Hospital) ದಾಖಲಿಸಲಾಗಿತ್ತು. ಆದರೆ, ತೀವ್ರ ವಿಷಪೂರಿತವಾಗಿದ್ದ ಕಾರಣ ಚಿಕಿತ್ಸೆ ಫಲಿಸದೇ ರವಿಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದಾಗಿ ರೈತರ ಆತ್ಮಹತ್ಯೆ ಮತ್ತು ಸಾಲದ ಸಮಸ್ಯೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.






