ಬಾಗಲಕೋಟೆ: ಜಿಲ್ಲೆಯ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟನೂರು ಕ್ರಾಸ್ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ ಟ್ಯಾಂಕರ್ (Cement Tanker) ಮತ್ತು ಲಾರಿ (Lorry) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳು ನಜ್ಜುಗುಜ್ಜಾಗಿದ್ದು, ಒಳಗೆ ಸಿಲುಕಿದ್ದ ಶವಗಳನ್ನು ಪೊಲೀಸರು ಜೆಸಿಬಿ (JCB) ಮೂಲಕ ಹೊರತೆಗೆದಿದ್ದಾರೆ. ಈ ದುರ್ಘಟನೆಯಲ್ಲಿ ಮಲ್ಲಿಕಾರ್ಜುನ ಗುರಿಕಾರ (22), ರೇವಣಸಿದ್ದಪ್ಪ ಕಡೆಮನಿ (20) ಮತ್ತು ಸುರೇಶ್ ಕೊಣ್ಣೂರ (33) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಮೇಶ ಮಾದರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ದಾರ್ಥ್ ಗೋಯಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ಕೆಲಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿ ಪ್ರಯಾಣಿಕರು ಹರಸಾಹಸ ಪಡುವಂತಾಯಿತು. ಸದ್ಯ ಲೋಕಾಪುರ ಪೊಲೀಸರು ಪ್ರಕರಣ ದಾಖಲಾಗಿದೆ.






