ಶಿವಮೊಗ್ಗ: ಡೆವಿಲ್ (Devil) ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನಿಗೆ ರಾಜಹಂಸ ಬಸ್ (Rajhamsa Bus) ಡಿಕ್ಕಿ ಹೊಡೆದ ಪರಿಣಾಮ, ಆತ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಕಳೆದ ರಾತ್ರಿ ತೀರ್ಥಹಳ್ಳಿ ತಾಲೂಕಿನ (Thirthahalli Taluk) ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಮೀನುಗುಂದ ಗ್ರಾಮದ ಪುನೀತ್ (26) ಎಂದು ಗುರುತಿಸಲಾಗಿದೆ.
ಮೃತ ಯುವಕ ತೀರ್ಥಹಳ್ಳಿಯ ವಿನಾಯಕ ಚಿತ್ರ ಮಂದಿರದಲ್ಲಿ ನಡೆದ ಡೆವಿಲ್ ಸಿನಿಮಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸಂಭ್ರಮಾಚರಣೆ ಮುಗಿಸಿ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದಾಗ, ರಾಜಹಂಸ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಪುನೀತ್ ಸಾವನ್ನಪ್ಪಿದ್ದಾರೆ. ಈ ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣೆ (Thirthahalli Police Station) ವ್ಯಾಪ್ತಿಯಲ್ಲಿ ದಾಖಲಾಗಿದೆ.






