ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (M. Chinnaswamy Stadium) ಐಪಿಎಲ್ (IPL) ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು (International Cricket Matches) ಮತ್ತೆ ಆಯೋಜಿಸಲು ಅವಕಾಶ ನೀಡುವ ಸಂಬಂಧ ಇಂದು ರಾಜ್ಯ ಸಚಿವ ಸಂಪುಟದಲ್ಲಿ (Cabinet Meeting) ಚರ್ಚೆ ನಡೆಯುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ (Venkatesh Prasad) ಅವರು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಕೆಎಸ್‌ಸಿಎ ಮನವಿಗೆ ಸಿಎಂ ಮತ್ತು ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಕ್ಯಾಬಿನೆಟ್‌ನಲ್ಲಿ ಸಾಧಕ-ಬಾಧಕಗಳ ಚರ್ಚೆ:
ಕಾಲ್ತುಳಿತ ದುರಂತದ (Stampede Tragedy) ಹಿನ್ನೆಲೆಯಲ್ಲಿ ಈಗಾಗಲೇ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ನಿರ್ಬಂಧ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರು ಇಂದು ಈ ಮನವಿಯನ್ನು ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಿ, ಸಚಿವರ ಅಭಿಪ್ರಾಯ ಪಡೆಯಲಿದ್ದಾರೆ. ಪಂದ್ಯಾವಳಿಗೆ ಅವಕಾಶ ನೀಡಿದರೆ ಆಗುವ ಸಾಧಕ-ಬಾಧಕಗಳ (Pros and Cons) ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಅಲ್ಲದೆ, ಕಾನೂನು ತೊಡಕುಗಳು ಎದುರಾಗದಂತೆ ಎಚ್ಚರಿಕೆ ವಹಿಸಲು, ಈ ಸಂಬಂಧ ಕಾನೂನು ಸಲಹೆ (Legal Advice) ಪಡೆಯುವ ಸಾಧ್ಯತೆ ಇದೆ. ಕ್ಯಾಬಿನೆಟ್‌ನಲ್ಲಿ ಚರ್ಚೆ ಮತ್ತು ಕಾನೂನು ಸಲಹೆಯ ನಂತರ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.






