Home State Politics National More
STATE NEWS

Horrible Accident | ಲಾರಿ-ಕಾರಿನ ನಡುವೆ ಭೀಕರ ರಸ್ತೆ ಅಪಘಾತ; ಪ್ರವಾಸಿಗರು ಪವಾಡಸದೃಶ ಪಾರು!

Fatal road accident between lorry and car The tour
Posted By: Sagaradventure
Updated on: Dec 16, 2025 | 5:15 PM

ಕಾರವಾರ: ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಪ್ರವಾಸಿಗರ ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತವೊಂದು ದಾಂಡೇಲಿ ತಾಲೂಕಿನ ಹಳಿಯಾಳ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾಂಡೇಲಿಯ ಶ್ರೇಯಸ್ ಪೇಪರ್ ಮಿಲ್ ಸಮೀಪ ಘಟನೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ, ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಸೊಂದನ್ನು ತಪ್ಪಿಸಲು ಹೋದ ಲಾರಿ ಚಾಲಕ, ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯನ್ನು ಬಿಟ್ಟು ಸುಮಾರು 20 ಮೀಟರ್‌ ದೂರದ ಅರಣ್ಯ ಪ್ರದೇಶದೊಳಗೆ ನುಗ್ಗಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದವರು ದಾಂಡೇಲಿಯಲ್ಲಿ ತಮ್ಮ ಪ್ರವಾಸವನ್ನು ಮುಗಿಸಿಕೊಂಡು ವಿಜಯಪುರ ಕಡೆಗೆ ಪ್ರಯಾಣಿಸುತ್ತಿದ್ದರು. ಕಾರು ಸಂಪೂರ್ಣ ಜಖಂಗೊಂಡಿದ್ದರೂ, ಒಳಗಿದ್ದ ಪ್ರಯಾಣಿಕರಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಅರಣ್ಯಕ್ಕೆ ನುಗ್ಗಿದ ರೀತಿಯನ್ನು ಕಂಡರೆ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

​ವಿಷಯ ತಿಳಿದ ತಕ್ಷಣ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Shorts Shorts