ಕೊಪ್ಪಳ: ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬೊಲೆರೊ ವಾಹನ ಹಾಗೂ ಬೈಕ್ (Bike and Bolero) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟ ಯುವಕರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್ ಮತ್ತು ರಾಜಾ ಹುಸೇನ್, ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಗಂಗಾವತಿ ತಾಲೂಕಿನ ಶ್ರೀರಾಮನಗರದಿಂದ ಕೊಪ್ಪಳ ತಾಲೂಕಿನ ಹೊಸಹಳ್ಳಿಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇಂದರಗಿ ಗ್ರಾಮದ ಬಳಿ ವೇಗವಾಗಿ ಬಂದ ಬುಲೆರೋ ವಾಹನ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಬೊಲೆರೊ ಚಾಲಕ ವಾಹನ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ(Driver absconding). ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






