ಗೋಕರ್ಣ: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತು ‘ಕುರ್ಚಿ’ ಕದನ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಅವರು, ಪವಿತ್ರ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಗೋಕರ್ಣಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರು ಆತ್ಮೀಯವಾಗಿ ಬರಮಾಡಿಕೊಂಡರು. ಪರಶಿವನ ಸನ್ನಿಧಿಯಲ್ಲಿ ಜಲಾಭಿಷೇಕ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಗೋಕರ್ಣದ ಮಹಾಬಲೇಶ್ವರನ ದರ್ಶನ ಪಡೆದು, ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ವೈಯಕ್ತಿಕ ಅಭೀಷ್ಟೆಗಳಿಗಿಂತ ಮಿಗಿಲಾಗಿ ನಾಡಿನ ಒಳಿತಿಗಾಗಿ ಮತ್ತು ಸಮಸ್ತ ಜನರ ಸುಭಿಕ್ಷೆಗಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ” ಎಂದು ತಿಳಿಸಿದರು.
ಇದಾದ ನಂತರ ಅಂಕೋಲಾ ತಾಲೂಕಿನ ಅಂತೆ ಜಗದೀಶ್ವರಿ ದೇವಿ (Jaganmathe Jagadeeshwari) ಸನ್ನಿಧಿಗೆ ಭೇಟಿ ನೀಡಿ ‘ಹಿಂಗಾರ’ದ ಮೂಲಕ ಭವಿಷ್ಯ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ.






