ಬೆಳ್ತಂಗಡಿ : ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Skull Case) ಪ್ರಮುಖ ಆರೋಪಿ ಚಿನ್ನಯ್ಯ, ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಇರುವ ಕಾರಣ ರಕ್ಷಣೆ ನೀಡಬೇಕೆಂದು ಕೋರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಸುಮಾರು ಮೂರು ತಿಂಗಳ ಕಾಲ ಶಿವಮೊಗ್ಗ ಜೈಲಿನಲ್ಲಿದ್ದಚಿನ್ನಯ್ಯ, ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi), ಜಯಂತ್, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಸಮೀರ್ ಎಂ ಡಿ (Sameer M D) ಹಾಗೂ ಇವರ ಸಂಗಡಿಗರಿಂದ ತನಗೆ ಮತ್ತು ತನ್ನ ಪತ್ನಿಗೆ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸಬಹುದು ಎಂದು ಪೊಲೀಸ್ ಭದ್ರತೆ ಒದಗಿಸುವಂತೆ ಠಾಣೆಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಧರ್ಮಸ್ಥಳದ ಬಳಿ ಬುರುಡೆಗಳು ಪತ್ತೆಯಾದ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಚಿನ್ನಯ್ಯ ಅವರನ್ನು ಬಂಧಿಸಲಾಗಿತ್ತು. ಸದ್ಯ ಜಾಮೀನಿನ ಮೇಲೆ ಹೊರಬಂದಿರುವ ಇವರ ನಡೆ ಈಗ ಕುತೂಹಲ ಮೂಡಿಸಿದೆ.






