Home State Politics National More
STATE NEWS

Tragic Deaths | ಹಾಸನದಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಬ*ಲಿ

Hassan
Posted By: Meghana Gowda
Updated on: Dec 20, 2025 | 6:42 AM

ಹಾಸನ: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಹೃದಯಾಘಾತದ (Heart Attack) ಸರಣಿ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಇಂದು ಮುಂಜಾನೆ ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಓರ್ವ ಶಿಕ್ಷಕಿ ಹಾಗೂ ಯುವಕನೊಬ್ಬ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕಿಯಾಗಿದ್ದ (Teacher) ಸುಧಾಮಣಿ (58) ಅವರು ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಕರ್ತವ್ಯನಿಷ್ಠ ಶಿಕ್ಷಕಿಯ ಅಕಾಲಿಕ ನಿಧನಕ್ಕೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ಹಾಗೂ ಹೊಳೆನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದಲ್ಲಿ ಮತ್ತೊಂದು ಘಟನೆ ನಡೆದಿದೆ. ಹೋಟೆಲ್‌ನಲ್ಲಿ ಕೆಲಸ (Hotel Worker)  ಮಾಡುತ್ತಿದ್ದ ಪರಮೇಶ್ (35) ಎಂಬುವವರು ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಿರಿಯ ವಯಸ್ಸಿನಲ್ಲೇ ಪರಮೇಶ್ ಮೃತಪಟ್ಟಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಹಂಗಿಲ್ಲದೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಜಿಲ್ಲೆಯ ಜನತೆಯಲ್ಲಿ ಭೀತಿ ಮೂಡಿಸಿದೆ.

Shorts Shorts