Home State Politics National More
STATE NEWS

Seasonal Flu: ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ; ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Sick
Posted By: Meghana Gowda
Updated on: Dec 22, 2025 | 4:01 AM

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಬದಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಹೆಚ್ಚಿನ  ಪರಿಣಾಮ ಬೀರುತ್ತಿದೆ. ಹೀಗಾಗಿ 2026ರ ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಸೀಸನಲ್ ಇನ್ ಫ್ಲೂಯೆಂಜಾ (Seasonal Influenza) ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಹಿಸಬೇಕೆಂದು ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ಫ್ಲೂ ಲಕ್ಷಣಗಳೇನು?

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈಕೈ ನೋವು, ಶೀತ, ಒಣ ಕೆಮ್ಮು ಸೀಸನಲ್​ ಫ್ಲೂನ ಪ್ರಮುಖ ಗುಣ ಲಕ್ಷಣಗಳಾಗಿದ್ದು, ಸೀಸನಲ್​ ಫ್ಲೂ ಸಾಮಾನ್ಯವಾಗಿ ಒಂದು ವಾರ ಅಥವಾ 3 ವಾರಗಳ ಕಾಲ ಇರಲಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ

ಜಿಲ್ಲೆಗಳಲ್ಲಿ ಉಸಿರಾಟದ ತೊಂದರೆ (SARI) ಮತ್ತು ಜ್ವರದ ಲಕ್ಷಣವಿರುವ (ILI) ಪ್ರಕರಣಗಳ ಮೇಲೆ ತೀವ್ರ ನಿಗಾ ವಹಿಸುವುದು. ಅಗತ್ಯವಿದ್ದಲ್ಲಿ ತಪಾಸಣಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು. ಒಸೆಲ್ಟಾಮಿವಿರ್ ಔಷಧ ಮತ್ತು ಪಿಪಿಇ ಕಿಟ್‌ಗಳ ಸಾಕಷ್ಟು ದಾಸ್ತಾನು ನಿರ್ವಹಿಸುವುದು. ವೆಂಟಿಲೇಟರ್‌ಗಳು ಮತ್ತು ಕ್ರಿಟಿಕಲ್ ಕೇರ್ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.

ಇದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಹೈ-ರಿಸ್ಕ್ ಸಿಬ್ಬಂದಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವುದು. ರೋಗ ಹರಡುವಿಕೆ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ತೀವ್ರಗೊಳಿಸುವುದು. ಮತ್ತು ಐಡಿಎಸ್ಪಿ ವ್ಯವಸ್ಥೆಯ ಮೂಲಕ ಪ್ರತಿದಿನದ ಪ್ರಕರಣಗಳ ವರದಿಯನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.

ಹಾಗೂ ಸಾರ್ವಜಿನಿಕರು  ಇದನ್ನು ಗಮನದಟ್ಟುಕೊಂಡು ತಮ್ಮ ಆರೋಗ್ಯದ ಕಡೆ ಹೆಚ್ಚು ನಿಗಬಹಿಸಬೇಕು ಎಂದು ಹೇಳಿದೆ.

Shorts Shorts