Home State Politics National More
STATE NEWS

ಶಾಸಕ ಬೈರತಿ ಬಸವರಾಜ್‌ಗೆ Big shock; ನಿರೀಕ್ಷಣಾ ಜಾಮೀನು ಅರ್ಜಿ ವಜಾ

Byrathi basavaraj (1)
Posted By: Meghana Gowda
Updated on: Dec 23, 2025 | 12:53 PM

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಕೊಲೆ ಪ್ರಕರಣದ ಒಳಸಂಚಿನ ಆರೋಪ ಎದುರಿಸುತ್ತಿರುವ ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು (Byrathi Basavaraj) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ (Anticipatory Bail Denied).

ಇಂದು ನಡೆದ ಸುದೀರ್ಘ ವಿಚಾರಣೆಯ ನಂತರ, ಅಪರಾಧದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಬೈರತಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ (Bail Petition Dismissed). ತನಿಖೆಯ ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯನಾಶ ಮಾಡುವ ಸಾಧ್ಯತೆ ಇದೆ ಎಂಬ ಸಿಐಡಿ (CID) ಪೊಲೀಸರ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.

ನಾಪತ್ತೆಯಾದ ಶಾಸಕ

ಕಳೆದ ಮೂರು ದಿನಗಳಿಂದ ಬೈರತಿ ಬಸವರಾಜು ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಯಾರಿಗೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಬೆಂಗಳೂರಿನ ಅವರ ನಿವಾಸದ ಮೇಲೆ ದಾಳಿ ನಡೆಸಿದರೂ ಶಾಸಕರು ಪತ್ತೆಯಾಗಿಲ್ಲ. ಸದ್ಯ ಅವರು ಮಹಾರಾಷ್ಟ್ರ ಅಥವಾ ಗೋವಾದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ (Search in Maharashtra and Goa).

ಜಾಮೀನು ಅರ್ಜಿ ವಜಾಗೊಂಡಿರುವ ಕಾರಣ, ಸಿಐಡಿ ಪೊಲೀಸರು ಶಾಸಕರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ (Arrest) ಸಾಧ್ಯತೆ ದಟ್ಟವಾಗಿದೆ.

Shorts Shorts