ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ (Bellari-Siruguppa State Highway) ಈ ಅಪಘಾತ ಸಂಭವಿಸಿದ್ದು, ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ (3 deaths on the spot).
ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಿನ ಜಾವ ಪ್ರಯಾಣಿಕರು ತಮಿಳುನಾಡಿನಿಂದ ವಾಪಸ್ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು (Tekkalakote Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.






