ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಮೃತರ ಕುಟುಂಬದವರಿಗೆ ತಕ್ಷಣದ ಆರ್ಥಿಕ ನೆರವು ಘೋಷಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ. ಘಟನೆಯಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರದಿಂದ ಘೋಷಿಸಲಾಗಿದೆ.
ಬಸ್ ಮತ್ತು ಕಂಟೈನರ್ ನಡುವೆ ನಡೆದ ಈ ಭೀಕರ ಡಿಕ್ಕಿಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಟ್ಟು 9 ಜನರು ಸಾವನ್ನಪ್ಪಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು ಮೃತರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.






