ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ‘ತಾಯಮ್ಮ’ (Tayamma) ಹೆಸರಿನ 4 ವರ್ಷ 10 ತಿಂಗಳ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಈ ಹುಲಿ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ಮೃಗಾಲಯದ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
Chitradurga | ಸಂಪರ್ಕಕ್ಕೆ ಸಿಗದ ಶಿರಾಲಿ ಮೂಲದ ರಶ್ಮಿ; ಮಗಳ ಹುಡುಕಾಟದಲ್ಲಿ ಚಿತ್ರದುರ್ಗಕ್ಕೆ ತೆರಳಿದ ತಂದೆ
ಈ ಹೆಣ್ಣು ಹುಲಿಯನ್ನು 2021ರಲ್ಲಿ ಬಂಡೀಪುರ ಅಭಯಾರಣ್ಯದಿಂದ ರಕ್ಷಿಸಿ ಮೈಸೂರು ಮೃಗಾಲಯಕ್ಕೆ ತರಲಾಗಿತ್ತು. ಹುಲಿ ತೀವ್ರ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಹಾರ ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಿತ್ತು.
ಮೃಗಾಲಯದ ವೈದ್ಯಕೀಯ ತಂಡ ಹುಲಿಗೆ ನಿರಂತರ ಚಿಕಿತ್ಸೆ ನೀಡುತ್ತಿತ್ತಾದರೂ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹುಲಿ ಸಾವನ್ನಪ್ಪಿದೆ.






