ಕಾರವಾರ: ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಇಂದು ಕಾರವಾರದ ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಗ್ಶೀರ್’ (INS Vagsheer) ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದ ದೇಶದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಈ ಐತಿಹಾಸಿಕ ಕ್ಷಣದಲ್ಲಿ ನೌಕಾಪಡೆಯ ಮುಖ್ಯಸ್ಥರಾದ (Chief of the Naval Staff) ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಮತ್ತು ಕರ್ನಾಟಕ ನೇವಲ್ ಏರಿಯಾದ ಫ್ಲಾಗ್ ಆಫೀಸರ್ ಕಮಾಂಡಿಂಗ್, ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಅವರು ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು. ರಾಷ್ಟ್ರಪತಿಗಳು ಸಬ್‌ಮರೀನ್‌ನ ಕಾರ್ಯಕ್ಷಮತೆ ಮತ್ತು ನೌಕಾಪಡೆಯ ಸನ್ನದ್ಧತೆಯನ್ನು ಖುದ್ದು ವೀಕ್ಷಿಸಿದರು.
ಇದನ್ನೂ ಓದಿ: ????ಕಡಲಾಳದಲ್ಲಿ ‘Supreme Commander’ ಸಾಹಸ: Submarine ನಲ್ಲಿ ಸಂಚರಿಸುವ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಇತಿಹಾಸ ಬರೆಯಲಿರುವ ಮುರ್ಮು!
ಇದಕ್ಕೂ ಮುನ್ನ ಕದಂಬ ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಯಂತಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್, ಎಸ್ಪಿ ದೀಪನ್ ಎಂ.ಎನ್. ಹಾಗೂ ಕಾರವಾರ ನೇವಲ್ ಬೇಸ್‌ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






