ಬೆಂಗಳೂರು: ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಈಗಾಗಲೇ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಅವರ ಲುಕ್ ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದ್ದ ಚಿತ್ರತಂಡ, ಇದೀಗ ಸೌತ್ ಸಿನಿಮಾರಂಗದ ದಿಗ್ಗಜ ನಟಿ ನಯನತಾರಾ (Nayanthara) ಅವರ ಫಸ್ಟ್ ಲುಕ್ ರಿಲೀಸ್ ಮಾಡಿದೆ.
ಟಾಕ್ಸಿಕ್ ಸಿನಿಮಾದಲ್ಲಿ ನಯನತಾರಾ ಅವರು ‘ಗಂಗಾ’ (Ganga) ಎಂಬ ಶಕ್ತಿಯುತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೂಲಗಳ ಪ್ರಕಾರ, ನಯನತಾರಾ ಅವರು ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿಯ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗಿದ್ದು, ಈ ಅಣ್ಣ-ತಂಗಿಯ ಸೆಂಟಿಮೆಂಟ್ ಸಿನಿಮಾದ ಹೈಲೈಟ್ ಆಗಲಿದೆ ಎಂಬ ಮಾಹಿತಿ ಇದೆ.
ಈಗಾಗಲೇ ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಚಿತ್ರದ ಭಾಗವಾಗಿರುವುದು ಖಚಿತವಾಗಿದೆ. ಈಗ ನಯನತಾರಾ ಸೇರ್ಪಡೆಯಿಂದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಸಿನಿಮಾ ಭೂಗತ ಲೋಕದ ಕಥೆಯನ್ನು ಹೊಂದಿದ್ದು, ತಾರಾಗಣದಲ್ಲಿನ ದೊಡ್ಡ ಹೆಸರುಗಳು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿವೆ.






