ಧಾರವಾಡ: ಧಾರವಾಡದ ಸುಣ್ಣದಬಟ್ಟಿ ಬಡಾವಣೆಯಲ್ಲಿ ಅನಿಲ ಸಿಲಿಂಡರ್ ಸ್ಫೋಟಗೊಂಡು(Cylinder Blast) ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಪುಟ್ಟ ಮಕ್ಕಳೂ ಸೇರಿದ್ದು, ಇಡೀ ಬಡಾವಣೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಧಾರವಾಡ ಸಮೀಪದ ಸುಣ್ಣದಬಟ್ಟಿ ಬಡಾವಣೆಯ,ಇಸ್ಮಾಯಿಲ್ ಹೊರಕೇರಿ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಒಟ್ಟು ಆರು ಜನರು ಗಾಯಗೊಂಡಿದ್ದು, ಇದರಲ್ಲಿ ಪುಟ್ಟ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಧಾರವಾಡದ ಜಿಲ್ಲಾ ಆಸ್ಪತ್ರೆಗೆ (Dharwad Hospital) ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳಿಗೆ ಹಾನಿಯಾಗಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






